ಮುಖ್ಯ ಅತಿಥಿಗಳಾದ ಶ್ರೀ ಶಿವಾನಂದ ಗುಂಡಾರ, ತಾಲೂಕಾ ದೈಹಿಕ ಶಿಕ್ಷಣಾಧಿಕಾರಿಗಳು ಹುಬ್ಬಳ್ಳಿ ಶಹರ ವಲಯ, ಇವರು ಮಾತನಾಡಿ ಮಕ್ಕಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ಅವರ ಸರ್ವಾಂಗೀಣ ಬೆಳವಣಿಗೆಗೆ ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
​                        ಅಧ್ಯಕ್ಷತೆ ವಹಿಸಿದಂತಹ ಜೆ.ಕೆ.ಶಿಕ್ಷಣ ಸಂಸ್ಥೆಯ ಚೇರಮನ್ನರಾದ ಶ್ರೀ ಜಗದೀಶ ಕಲ್ಯಾಣಶೆಟ್ಟರ, ಇವರು ಮಾತನಾಡಿ ಇವತ್ತಿನ ಮಕ್ಕಳು ಜೆನ್ ಜೆ ಮಕ್ಕಳು ಅವರಿಗೆ ಬೋಧನೆಯ ಜೊತೆಗೆ ಪತ್ಯೇತರ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದರು. ವಿದ್ಯಾರ್ಥಿಗಳು ಗುರು ಹಿರಿಯರ ಮಾರ್ಗದರ್ಶನದಂತೆ ಕಷ್ಟಪಟ್ಟು ಓದಿ ಹಾಗೂ ತಮ್ಮ ಪ್ರತಿಭೆಗಳ ಸಾಕ್ಷಾತ್ಕಾರ ಮಾಡಿಕೊಂಡರೆ ವಿದ್ಯಾರ್ಥಿಗಳ ಜೀವನಕ್ಕೆ ಒಂದು ಗೌರವ ಬರುತ್ತದೆ ಎಂದು ತಿಳಿಸಿದರು.
     ಶ್ರೀಮತಿ ಶ್ರೀದೇವಿ ನಾಗಲೇಕರ ಸಂಪನ್ಮೂಲ ವ್ಯಕ್ತಿಗಳು ಸಮೂಹ ಸಂಪನ್ಮೂಲ ಕೇಂದ್ರ ನಾಗಶೆಟ್ಟಿಕೊಪ್ಪ ಇವರು ಸ್ವಾಗತ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.
ಶಿಕ್ಷಣ ಸಂಯೋಜಕರಾದ ಶ್ರೀಮತಿ ವನಿತಾ ಮೇಂಡರವರು, ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು. ಗೌರವಾನ್ವಿತ ಅತಿಥಿಗಳಾದ ಇ.ಸಿ.ಓ, ಬಿಆರ್.ಪಿ, ಸಿ.ಆರ್.ಪಿ, ಬಿಐಆರ್‌ಟಿ, ಕ.ಪ್ರಾ.ಶಾ.ಶಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಾಗಶೆಟ್ಟಿಕೊಪ್ಪ ಕ್ಲಸ್ಟರಿನ್ ಎಲ್ಲಾ ಶಾಲೆಗಳ ಪ್ರಧಾನ ಗುರುಗಳು ಮಾರ್ಗದರ್ಶಕ ಶಿಕ್ಷಕರುಗಳು ತೀರ್ಪುಗಾರರು ಹಾಗೂ ಸ್ಪರ್ಧಾಳುಗಳು ಉಪಸ್ಥಿತರಿದ್ದರು.
          ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆ, ಕಂಠಪಾಠ ಸ್ಪರ್ಧೆ, ಕಥೆ ಹೇಳುವ ಸ್ಪರ್ಧೆ, ಭಕ್ತಿಗೀತೆ, ಜಾನಪದ ನೃತ್ಯ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕ್ಲೇ ಮಾಡೆಲಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರತಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಕ್ಲಸ್ಟರ್ ಮಟ್ಟದಲ್ಲಿ ಆಯ್ಕೆಯಾದ ಮಕ್ಕಳ ಹೆಸರುಗಳನ್ನು ಘೋಷಿಸಲಾಯಿತು.
          ಒಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವು ತುಂಬಾ ಯಶಸ್ವಿಯಾಗಿ ನಡೆಯಿತು. ಇದರಿಂದ ಮಕ್ಕಳಲ್ಲಿದ್ದ ಭಯ, ಸಂಕೋಚ ದೂರವಾಯಿತು. ಮಕ್ಕಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹೆಚ್ಚಾಯಿತು. ಮಕ್ಕಳು ತಮ್ಮ ಪ್ರತಿಭೆಯನ್ನು ತೋರಿಸಲು ಒಳ್ಳೆಯ ವೇದಿಕೆ ಸಿಕ್ಕಿತು. ಕೊನೆಯದಾಗಿ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

​

ದಿನಾಂಕ: 20/11/2026ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹುಬ್ಬಳ್ಳಿ ಶಹರ ವಲಯ, ಸಮೂಹ ಸಂಪನ್ಮೂಲ ಕೇಂದ್ರ ನಾಗಶೆಟ್ಟಿಕೊಪ್ಪ ಮತ್ತು ಜೆ. ಕೆ. ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಮಧುರಾ ಪಾರ್ಕ್, ಸಂತೋಷ ನಗರ, ಹುಬ್ಬಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕವಾಗಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ವೇದಿಕೆಯನ್ನು “ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ” ಹೆಸರಿನಡಿಯಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು. ಶ್ರೀ ಎಚ್.ಎಮ್.ಫಡ್ನಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಹರ ವಲಯ ಹುಬ್ಬಳ್ಳಿ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದೇ ನಮ್ಮ ಕರ್ತವ್ಯ. ಜ್ಞಾನ ಪಡೆಯುವುದು ಮಾತ್ರವಲ್ಲದೆ, ಮಾನವೀಯ ಮೌಲ್ಯಗಳನ್ನು ಸಹಕಾರ ಮತ್ತು ಸಹಾನುಭೂತಿಯನ್ನು ಈ ಜೀವನದಲ್ಲಿ ಕಲಿಯಲು ಸಾಧ್ಯ. ಸೂಕ್ಷ್ಮವಾಗಿರುವ ಪ್ರತಿಭೆಗಳನ್ನು ಪಾಲಕರು ಹಾಗೂ ಶಿಕ್ಷಕರು ಗುರುತಿಸಿ ಭವಿಷ್ಯದಲ್ಲಿ ಸೂಕ್ತ ವೇದಿಕೆಯನ್ನು ಕಲ್ಪಿಸಬೇಕು, ಈ ನಿಟ್ಟಿನಲ್ಲಿ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶ್ಲಾಘನೀಯ ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಅಚ್ಚುಕಟ್ಟಾಗಿ ಶಾಲೆಯವರು ಕಾರ್ಯಕ್ರಮವನ್ನು ಆಯೋಜಿಸಿರುವುದು ಪ್ರಶಂಸನೀಯ ಎಂದು ಹೇಳಿದರು.